ಹಾಸ್ಟೆಲ್, ಅಂಗನವಾಡಿಗಳಿಗೆ ಸ್ವಸಹಾಯ ಗುಂಪುಗಳಿಂದ ಆಹಾರ ಪೂರೈಕೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಜಿಲ್ಲೆಯಲ್ಲಿರುವ ಹಾಸ್ಟೆಲ್ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಬೇಕಾಗುವ ಆಹಾರ ಪದಾರ್ಥಗಳನ್ನು ಸ್ವಸಹಾಯ ಸಂಘಗಳಿಂದ ಪಡೆದುಕೊಳ್ಳಬೇಕೆಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ವತಿಯಿಂದ ಕಡ್ಲೇಬಾಳು ಗ್ರಾಮದ ಶ್ರೀಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಹೊಂಬೆಳಕು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಮಿತಿಯ ಮಹಾಸಭೆ ಮತ್ತು ಸರ್ಕಾರಿ ಯೋಜನೆಗಳ ಕುರಿತು ಮಹಿಳೆಯರೊಂದಿಗೆ ಸಂವಾದ ಹಾಗೂ ಕುಂದುಕೊರತೆಗಳ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತಾನಾಡಿದರು‌‌.

 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರ ಪಾತ್ರ ತುಂಬಾ ಇರುತ್ತದೆ. ಗರ್ಭಿಣಿ ಮಹಿಳೆಯರಿಗೆ ತಾಯಿ ಸ್ಥಾನವನ್ನು ನೀವು ತುಂಬುತ್ತಿರಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡಿಸಬೇಕು. ಸರಿಯಾದ ಸಮಯದಲ್ಲಿ ಅವರಿಗೆ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬೇಕು. ಸ್ವ ಸಹಾಯ ಸಂಘಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು. ಇದರಿಂದ ಆರ್ಥಿಕ ಸಬಲತೆಯಿಂದ ಶೋಷಣೆಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದರು.

ಕಡ್ಲೇಬಾಳು ಜನರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸರ್ಕಾರದ ಸೌಲಭ್ಯವನ್ನು ಪಡೆಯಬೇಕು ಎಂದರು. ರಸ್ತೆ, ದೀಪ, ನೈರ್ಮಲ್ಯ, ನೀರಿನ ವ್ಯವಸ್ಥೆ ಮುಂತಾದವುಗಳ ಸ್ಥಾಪನೆ, ನಿರ್ವಹಣೆಗಳು ಕಡ್ಡಾಯವಾದ ಕರ್ತವ್ಯಗಳು. ಆದಾಯ ಹೆಚ್ಚಿಸುವಂಥ ಕೆರೆ ಬಾವಿಗಳ ನಿರ್ಮಾಣ, ಅರಣ್ಯ ಬೆಳವಣಿಗೆ ಮೊದಲಾದ ಕಾರ್ಯಕ್ರಮಗಳನ್ನೂ ಶಿಕ್ಷಣ, ವಸತಿ, ವಾಚನಾಲಯ, ಕ್ರೀಡಾಂಗಣ, ತೋಟಗಳು ಮುಂತಾದ ಸೌಕರ್ಯಗಳನ್ನು ಒದಗಿಸುವಂಥ ಯೋಜನೆಗಳನ್ನೂ ಪಂಚಾಯತಿಗಳು ಕೈಗೊಳ್ಳಬಹುದು ಎಂದರು.

 ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ್.ಬಿ.ಇಟ್ನಾಳ್ ಮಾತಾನಾಡಿ, ಸ್ತ್ರೀ ಶಕ್ತಿ ಯೋಜನೆಯ ಸ್ಥಾಪನೆಯಾಗಿ 10 ವರ್ಷವಾಯಿತು. ಕಡ್ಲೆಬಾಳು ಗ್ರಾಮ ಪಂಚಾಯಿತಿಯಲ್ಲಿ 80 ಸ್ವ ಸಹಾಯ ಸಂಘ, 802 ಅಭ್ಯರ್ಥಿಗಳು ಜಿಎಫ್‌ಎಲ್ ಸೇರಿಕೊಂಡಿದ್ದಾರೆ. ನಮ್ಮ ಜಿಲ್ಲೆಯಲ್ಲಿ 3.80 ಲಕ್ಷ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ. 2 ಲಕ್ಷ ಜನ ಎನ್ ಆರ್ ಎಲ್ ಎಂ ವ್ಯಾಪ್ತಿ ಬಿಟ್ಟು ಹೊರಗಡೆ ಇದ್ದಾರೆ. ಅವರು ಕೂಡ ಈ ವ್ಯಾಪ್ತಿಗೆ ಅದಷ್ಟು ತರಬೇಕು ಎಂದರು.

   ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಪರಶುರಾಮ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಲ್ಲಾ ಇಲಾಖೆಯವರು ಪ್ರಗತಿ ವರದಿಯನ್ನು ನೀಡಿದರು. ಗರ್ಭಿಣಿ ಮಹಿಳೆಯರಿಗೆ ಶ್ರೀಮಂತ ಕಾರ್ಯವನ್ನು ನೆರೆವೇರಿಸಿದರು. ತೋಟಗಾರಿಕೆ ಇಲಾಖೆಯ ವತಿಯಿಂದ ಹಣ್ಣು ಮತ್ತು ತರಕಾರಿ ಬೀಜಗಳನ್ನು ವಿತರಣೆ ಮಾಡಲಾಯಿತು. ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡ್ಲೆಬಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಭರಮಕ್ಕ ಪರಸಪ್ಪನವರು ವಹಿಸಿದ್ದರು.   ತಹಶೀಲ್ದಾರ್ ಅಶ್ವಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಮುದೇಗೌಡ್ರ ಗಿರೀಶ್,ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಧರಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅಭಿಕುಮಾರ್.ಜಿ.ಎಸ್, ಗ್ರಾ.ಪಂ ಉಪಾಧ್ಯಕ್ಷರಾದ ಪ್ರಭಾಕರ್ ಕಡ್ಲೇಬಾಳು, ಹೊಂಬೆಳಕು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಪದಾಧಿಕಾರಿ ಮಂಜುಳ ಬಿ.ಎಂ ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read