ಸಾರ್ವಜನಿಕರ ಗಮನಕ್ಕೆ : ಡಿ.12 ರಂದು ಶಿವಮೊಗ್ಗದಲ್ಲಿ ಜನತಾದರ್ಶನ

ಶಿವಮೊಗ್ಗ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕತಿಕ ಭವನದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಶಿಕಾರಿಪುರ ತಾಲ್ಲೂಕಿನ ಸಾರ್ವಜನಿಕರು ಜನತಾದರ್ಶದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಲ್ಲಿಸಲು ಅವಕಾಶವಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯತಕ್ಕದ್ದು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read