BIG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ ; ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಿದೆ.

ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲು ದಿನಾಂಕ:19.06.2024 ರಿಂದ ಪ್ರಾರಂಭಿಸಿ ದಿನಾಂಕ:19.07.2024 ರವರೆಗೆ ಮುಕ್ತಾಯಗೊಳಿಸಲು ಕಾರ್ಯಕ್ರಮ ನಿರ್ದೇಶಕರು, ರಾಜ್ಯ ವಿದ್ಯಾರ್ಥಿವೇತನ ಹಾಗೂ ವಿದ್ಯಾರ್ಥಿನಿಲಯ ಪೋರ್ಟಲ್ ಕೇಂದ್ರ ಬೆಂಗಳೂರು ರವರಿಗೆ ಕೋರಿದೆ. ಆದ್ದರಿಂದ, ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ರವರು 2024-25 ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ದಿನಾಂಕ:19.06.2024 ರಿಂದ ಪ್ರಾರಂಭಿಸಿ ದಿನಾಂಕ:19.07.2024 ರವರೆಗೆ ಅರ್ಜಿ ಆಹ್ವಾನಿಸಲು ಜಿಲ್ಲಾಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ನಿಯಮಾನುಸಾರ ಸೀಟುಗಳ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read