
ಕೆಂಗೇರಿ, ಚೆಲ್ಲಘಟ್ಟ ಹಗೂ ಬೈಯ್ಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಹಾಗಾಗಿ ವಾಣಿಜ್ಯ ಸೇವೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಆಗಸ್ಟ್ 23ರಂದು ಕೆಂಗೇರಿ ಹಾಗೂ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ಮೆಟ್ರೋ ಸಚಾರವಿರುವುದಿಲ್ಲ. ಮೈಸೂರು ರಸ್ತೆ ಹಾಗೂ ಸ್ವಾಮಿ ವಿವೇಕಾನಂದ ನಿಲ್ದಾಣಗಳ ನಡುವೆ ಮಾತ್ರ ಈ ಅವಧಿಯಲ್ಲಿ ಮೆಟ್ರೋ ಸಂಚರಿಸಲಿದೆ. ಬಳಿಕ ಬೆಳಿಗ್ಗೆ 7 ಗಂಟೆಯಿಂದ ಎಂದಿನಂತೆ ಕೆಂಗೇರಿಯಿಂದ ಬೈಯ್ಯಪ್ಪನಹಳ್ಳಿ ನಿಲ್ದಾಣದ ನಡುವೆ ಮೆಟ್ರೋ ಸಂಚಾರವಿರಲಿದೆ.
ಆಗಸ್ಟ್ 20 ಹಾಗೂ 29ರಂದು ಬಯ್ಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ ಮಾರ್ಗಗಳ ನಡುವೆ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ರೈಲು ಸಂಚಾರವಿರುವುದಿಲ್ಲ. ಈ ಅವಧಿಯಲ್ಲಿ ಸ್ವಾಮಿ ವಿವೇವಾಕನಂದ ಮೆಟ್ರೋ ನಿಲ್ದಾಣದಿಂದ ಮಾತ್ರ ಮೆಟ್ರೋ ಸಂಚಾರ ಲಭ್ಯವಿರುತ್ತದೆ.ಇನ್ನು ಹಸಿರು ಮಾರ್ಗ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿ.ಎಂ.ಆರ್.ಸಿ.ಎಲ್ ತಿಳಿಸಿದೆ.

