ಕೋಲಾರ : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದಲ್ಲಿ ‘ತೇಲುವ ಸೌರಶಕ್ತಿ ಘಟಕ’ ನಿರ್ಮಾಣ ಮಾಡಲಾಗುತ್ತಿದೆ.
ಹೌದು. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸುಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ.
ಬಳಿಕ ಇದರ ಯಶಸ್ಸಿನ ಆಧಾರದ ಮೇಲೆ ರಾಜ್ಯದ ವಿವಿಧೆಡೆಗಳಲ್ಲಿ ಇಂತಹ 40ಕ್ಕೂ ಹೆಚ್ಚು ಕೆರೆಗಳಲ್ಲಿ ತೇಲುವ ಸೌರಶಕ್ತಿ ಘಟಕಗಳನ್ನು ನಿರ್ಮಿಸಿ, 2,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದೆ.

