ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಾಟರ್ ಮೆಟ್ರೋ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಜಲ ಸಾರಿಗೆ ಮಂಡಳಿ ಸಭೆಯಲ್ಲಿ ಕರ್ನಾಟಕ ಜಲ ಸಾರಿಗೆ ನೀತಿ- 2024 ಬಿಡುಗಡೆ ಮಾಡಲಾಗಿದೆ.
ಮಂಗಳೂರಿನ ಗುರುಪುರ ನೇತ್ರಾವತಿ ನದಿಯಲ್ಲಿ ಆರಂಭಿಸಲಿರುವ ವಾಟರ್ ಮೆಟ್ರೋ ಯೋಜನೆಯ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಮಂಗಳೂರಿನಲ್ಲಿ ವಾಟರ್ ಮೆಟ್ರೋ ಸೇವೆ ಶುರುವಾಗಲಿದೆ.
ಸಾಗರಮಾಲಾ ಯೋಜನೆಯಲ್ಲಿ ಮಂಗಳೂರಿನಲ್ಲಿ ಕರ್ನಾಟಕ ಜಲ ಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಕೂಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ.