HomeLatest Newsವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ: ಸಚಿವ ಪರಮೇಶ್ವರ್

ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ವಿದೇಶಿಗರನ್ನು ಕರೆಯಬೇಡಿ ಎಂದು ಸೂಚನೆ ನೀಡಿದ್ದೇವೆ. ಈ ವಿಚಾರವನ್ನು ಪೊಲೀಸ್‌ ಇಲಾಖೆಯ ಮೂಲಕ ಮಿಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈದ್ ಮಿಲಾದ್ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 5, 6 ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿದೇಶಿಗರು ಪಾಲ್ಗೊಳ್ಳಲು ಧರ್ಮ ಪ್ರಚಾರ ನಡೆಸಲು ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ಆಯೋಜಕರಿಗೆ ಸ್ಪಷ್ಟವಾಗಿ ತಿಳಿಸಿದೆ. ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ನಿಗಾ ವಹಿಸಲಿದೆ. ಪೊಲೀಸ್ ಇಲಾಖೆಯವರು ಕೂಡ ನಿಗಾ ವಹಿಸುತ್ತಾರೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿದೇಶಿಗರನ್ನು ಭಾಷಣಕ್ಕಷ್ಟೇ ಅಲ್ಲ, ಅವರ ಉಪಸ್ಥಿತಿಗೂ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular