HomeEntertainmentBREAKING: ರಿಷಬ್ ಶೆಟ್ಟಿ 'ಕಾಂತಾರ-2' ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ

BREAKING: ರಿಷಬ್ ಶೆಟ್ಟಿ ‘ಕಾಂತಾರ-2’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ

ಹಾಸನ: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ ಕೇಳಿ ಬಂದಿದೆ. ಅರಣ್ಯದ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ ಎಂದು ದೂರಲಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ‘ಕಾಂತಾರ -2’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಹೊಸೂರು ಗ್ರಾಮ ಪಂಚಾಯಿತಿಯ ಹೆರೂರು ಗ್ರಾಮದಲ್ಲಿ ಚಿತ್ರೀಕರಣ ಸ್ಥಳದಲ್ಲಿ ಅರಣ್ಯಕ್ಕೆ ಹಾನಿ ಮಾಡಲಾಗಿದೆ.

ಜನವರಿ 2ರಿಂದ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕೆ ಪರವಾನಿಗೆ ಪಡೆದಿರುವ ಚಿತ್ರತಂಡ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ನಾಶ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಚಿತ್ರತಂಡದ ನಡೆಯ ಬಗ್ಗೆ ಹೆರೂರು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರೀಕರಣಕ್ಕೆ ಯಾವೆಲ್ಲ ಪರವಾನಿಗೆ ನೀಡಿದ್ದಾರೆ ಎನ್ನುವ ಮಾಹಿತಿಯನ್ನು ಅರಣ್ಯ, ಕಂದಾಯ ಇಲಾಖೆಯವರು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular