ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಾಡ್ಗಿಚ್ಚು ಪ್ರಕರಣ: ಐಎಸ್ಎಫ್ ವರದಿ ಬಹಿರಂಗ

ಕಾರವಾರ: ರಾಜ್ಯದಲ್ಲಿ ಅತಿ ಹೆಚ್ಚು ಕಾಡ್ಗಿಚ್ಚು ಪ್ರಕರಣ ಉತ್ತರ ಕನ್ನಡ ಜಿಲೆಯಲ್ಲಿ ಸಂಭವಿಸುತ್ತಿದೆ ಎಂದು ಐಎಸ್ಎಫ್ ವರದಿ ಬಹಿರಂಗವಾಗಿದೆ.

ಕಳೆದ ಎರಡು ವರ್ಷಗಳಲ್ಲಿ ಉತ್ತರ ಕನ್ನಡದಲ್ಲಿ 2598 ಕಡೆಗಳಲ್ಲಿ ಕಾಡ್ಗಿಚ್ಚು ಪ್ರಕರಣ ನಡೆದಿದೆ. 2022-23ರಲ್ಲಿ 2,162 ಹಾಗೂ 2023-24ರಲ್ಲಿ 436 ಕಾಡ್ಗಿಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಈಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪರಿಸರ ಸೂಕ್ಷ್ಮ ವಲಯದ ಪಶ್ಚಿಮ ಘಟ್ಟ ಪ್ರದೇಶ ಹೊಂದಿರುವ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಡ್ಗಿಚ್ಚು ಪ್ರಕರಣಗಳು ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಜನವರಿಯಿಂದ ಮೇ ತಿಂಗಳ ಅವಧಿಯಲ್ಲಿ ಕಾಡ್ಗಿಚ್ಚು ಘಟನೆಗಳು ಸಂಭವಿಸುತ್ತಿವೆ. ಎರಡು ವರ್ಷಗಳ್ಲಲಿ ಕಾಡ್ಗಿಚ್ಚಿನಿಂದ ನೂರಾರು ಹೆಕ್ಟೇರ್ ಅರಣ್ಯ ಪ್ರದೇಶಕ್ಕೆ ಹಾನಿಯುಂಟಾಗಿದೆ. 2023ರಲ್ಲಿ ತೀವ್ರ ಬರಗಾಲದ ಸ್ಥಿತಿ ಇದ್ದ ಕಾರಣ ಹೆಚ್ಚು ಬೆಂಕಿ ಅವಘಡ ಸಂಭವಿಸಿದೆ. ರಾಜ್ಯದಲ್ಲಿ ಈ ವೇಳೆ 14 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ ಕೆನರಾ ಅರಣ್ಯ ಪ್ರದೇಶದಲ್ಲಿ 2 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ಸಂಭವಿಸಿವೆ.

ಅರೆಮಲೆನಾಡು ಪ್ರದೇಶಗಳಾಗಿರುವ ಹಳಿಯಾಳ, ಮುಂಡಗೋಡ, ಶಿರದ್ಸಿ ಆಲೂಕಿನ ಗಡಿ ಭಾಗಗಳಲ್ಲಿ ಕುರುಚಲು ಅರಣ್ಯ ಗಳಿಗೆ ಬೆಂಕಿ ಘಟನೆ ಹಾಗೂ ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಕಾಡ್ಗಿಚ್ಚಿನ ಘಟನೆ ಹೆಚ್ಚಿದ್ದರಿಂದ ಅಪದ ಪರಿಣಾಮ ಜಿಲ್ಲೆಯ ಮೇಲು ಬೀರಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಅಭಿಪ್ರಾಯವಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read