BREAKING: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರು: ತಹಶೀಲ್ದಾರ್ ಅಮಾನತು

ಬೆಂಗಳೂರು: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರಾತಿ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಹಶೀಲ್ದಾರ್ ಪೂರ್ಣಿಮಾ ಅವರನ್ನು ಅಮಾನತು ಮಾಡಲಾಗಿದೆ.

ಪ್ರಸ್ತುತ ತಹಶೀಲ್ದಾರ್ ಗ್ರೇಡ್-1 ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿ.ಎಸ್. ಪೂರ್ಣಿಮಾ ಅರಣ್ಯ ಜಮೀನನ್ನು ಸರ್ಕಾರದ ಪೂರ್ವಾನುಮತಿ ಪಡೆಯದೇ ಅಕ್ರಮ ಭೂ ಮಂಜೂರಾತಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತ್ತುಗೊಳಿಸಲಾಗಿದೆ.

ಭದ್ರಾವತಿ ವಿಭಾಗದ ಲಕ್ಕವಳ್ಳಿ ವಲಯದಲ್ಲಿನ ಅಧಿಸೂಚಿತ ಅರಣ್ಯ ಪ್ರದೇಶದ ರಂಗೇನಹಳ್ಳಿ ಗ್ರಾಮದ ಸರ್ವೆ ನಂ.4ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಹಿಂದಿನ ತಹಶೀಲ್ದಾರ್‌ ಗಳಾದ ಎನ್.ಟಿ. ಧರ್ಮೋಜಿ ರಾವ್, ಸಿ.ಎಸ್. ಪೂರ್ಣಿಮಾ ಅವರು ಸರ್ಕಾರದ ಪೂರ್ವಾನುಮತಿ ಪಡೆಯದೇ ಒಟ್ಟು 12-33 ಎಕರೆ/ಗುಂಟೆ ಅರಣ್ಯ ಜಮೀನನ್ನು ಅನಧಿಕೃತವಾಗಿ ಮಂಜೂರು ಮಾಡಿರುವುದಾಗಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯು ವರದಿ ನೀಡಿದ್ದು ಈ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read