BIG NEWS: ಅಕ್ರಮ ಮರ ಕಡಿತಲೆ ಮಾಡಿದವರಿಗೆ ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳ

ಬೆಂಗಳೂರು: ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಳ ಮಾಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಿಗೆ ಸಚಿವರು ಪತ್ರದ ಮೂಲಕ ಸಚಿವರು ನಿರ್ದೇಶನ ನೀಡಿದ್ದಾರೆ.

ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಳ ಮಾಡಲು ಅನುಕೂಲವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಕ್ಕೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಭಾರಿ ಪ್ರಮಾಣದಲ್ಲಿ ಮರಗಳನ್ನು ಕಡಿಯುವುದು ಮಾನವನ ಹತ್ಯೆ ಮಾಡಿದಂತೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಅಕ್ರಮವಾಗಿ ಮರ ಕಡಿತಲೆ ಮಾಡುವವರಿಗೆ ವಿಧಿಸುವ ದಂಡದ ಪ್ರಮಾಣದ ಹೆಚ್ಚಳದ ಅಗತ್ಯವನ್ನು ಪ್ರತಿಪಾದಿಸಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read