ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಮಹತ್ದವ ಕ್ರಮ: 153 ಎಕರೆಯಲ್ಲಿ ಕಬ್ಬನ್ ಪಾರ್ಕ್ ಮಾದರಿ ಉದ್ಯಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿಪಡಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತೀಯ ಅರಣ್ಯ ಸಮೀಕ್ಷೆ ವರದಿಯಂತೆ ಬೆಂಗಳೂರು ಭಾರತದಲ್ಲಿ ಅತಿ ಹೆಚ್ಚು ಭೂ ಪ್ರದೇಶ ಹೊಂದಿರುವ ಮೂರನೇ ನಗರವಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ನಗರದಲ್ಲಿ ಸುಮಾರು 89 ಚದರ ಕಿಲೋಮೀಟರ್ ನಷ್ಟು ಅರಣ್ಯ ಪ್ರದೇಶವಿದೆ. ಬೆಂಗಳೂರಿನ ವೃಕ್ಷ ಹೊದಿಕೆ ಶೇಕಡ 6.81 ರಷ್ಟಿದ್ದು, ಕಳೆದ ಹತ್ತು ವರ್ಷದಲ್ಲಿ ಬೆಂಗಳೂರಿನಲ್ಲಿ 5 ಚದರ ಕಿಲೋಮೀಟರ್ ನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ ಇದನ್ನು ಹೆಚ್ಚಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ. 153 ಎಕರೆ ಅರಣ್ಯ ಪ್ರದೇಶದಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಸ್ಯೋದ್ಯಾನ ಅಭಿವೃದ್ಧಿಪಡಿಸಲಿದ್ದು, ಅದಕ್ಕೆ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಎಂದು ಹೆಸರಿಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದ ಉದ್ಯಾನಗರ ಎಂಬ ಹೆಗ್ಗಳಿಕೆಯನ್ನು ಮರುಸ್ಥಾಪನೆ ಮಾಡಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮತ್ತಷ್ಟು ಸಸಿ ನೆಡಲಾಗುವುದು. ಒತ್ತುವರಿಯದ ಅರಣ್ಯ ಭೂಮಿ ಮರಳಿ ವಶಕ್ಕೆ ಪಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read