ಕಾಡು ಹಂದಿ ಸಾಯಿಸಲು ಕಚ್ಚಾ ಬಾಂಬ್ ಇಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಕಾಡುಹಂದಿಯನ್ನು ಸಾಯಿಸಲು ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ತಯಾರಿಸಿ ಇಡಲಾಗುತ್ತಿದ್ದು, ಇದನ್ನು ತಿಂದು ಜಾನುವಾರುಗಳು ಹಾಗೂ ವನ್ಯಜೀವಿಗಳು ಸಾವಿಗೀಡಾಗುತ್ತಿವೆ. ಕೂಡಲೇ ಈ ಬಗ್ಗೆ ನಿಗಾ ಇಟ್ಟು ಕಚ್ಚಾ ಬಾಂಬ್ ಇಡುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.