HomeKarnatakaBIG NEWS : ರಾಜ್ಯದಲ್ಲಿ ವೈದ್ಯರ ಸುರಕ್ಷತೆಗೆ ಕಾರ್ಯಪಡೆ ರಚನೆ : ಸಚಿವ ದಿನೇಶ್ ಗುಂಡೂರಾವ್

BIG NEWS : ರಾಜ್ಯದಲ್ಲಿ ವೈದ್ಯರ ಸುರಕ್ಷತೆಗೆ ಕಾರ್ಯಪಡೆ ರಚನೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಪಡೆಯಲು ಕಾರ್ಯಪಡೆಯೊಂದನ್ನು ರಚಿಸಲಾಗುವುದು. ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕಾನೂನು (ತಿದ್ದುಪಡಿ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿರುದ್ಧ ಅಗೌರವ ತೋರಿದರೆ, ಕೆಟ್ಟದಾಗಿ ಮಾತನಾಡಿದರೆ ಮತ್ತು ಹಿಂಸಾಚಾರ ನಡೆಸಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಇದು ಜಾಮೀನುರಹಿತ ಅಪರಾಧ. 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದು. ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡರೂ ಜಾಮೀನುರಹಿತ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular