ಬೆಂಗಳೂರು ನಗರ ಜಿಲ್ಲೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ಅಕ್ಕ ಪಡೆಗೆ ತಂಡ ರಚಿಸಲು NCC “C” ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 35 ರಿಂದ 45 ವಯೋಮಿತಿಯ ಮಹಿಳಾ ಅಭ್ಯರ್ಥಿ ಆಗಿರಬೇಕು. ದೈಹಿಕ ಸಧೃಡತೆ ಮತ್ತು ಸ್ಥಳೀಯ ನಿವಾಸಿ ಆಗಿರಬೇಕು. ಅಭ್ಯರ್ಥಿಗಳು ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಶಿಪ್ಟ್ನ ಲ್ಲಿ ಕೆಲಸ ನಿರ್ವಹಿಸಲು ಬದ್ದರಾಗಿರಬೇಕು.
ಆಸಕ್ತರು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್ ಮರಿಗೌಡ ರಸ್ತೆ, ಬೆಂಗಳೂರು-560029. ಇಲ್ಲಿ ಅರ್ಜಿಗಳನ್ನು ಪಡೆದುಕೊಂಡು, ನವೆಂಬರ್ 13, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29578688 ಅಥವಾ ಇ-ಮೇಲ್ dwcd.dd@gmail.com ಗೆ ಭೇಟಿ ನೀಡಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
