ಬೆಂಗಳೂರು: ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆ ಸಂಬಂಧ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಮುಂದಿನ ಸಂಪುಟ ಸಭೆಯಲ್ಲಿ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು.
ವಿಧಾನಪರಿಷತ್ ನಲ್ಲಿ ಬಿಜೆಪಿಯ ಕೆ. ಪ್ರತಾಪಸಿಂಹ ನಾಯಕ್ ಅವರು, ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಪಾರದರ್ಶಕತೆ ಕಾಪಾಡಲು, ರಾಜಕೀಯ ಹಸ್ತಕ್ಷೇಪಕ್ಕೆ ಕಡಿವಾಣ ಹಾಕಲು ಆದಷ್ಟು ಬೇಗನೆ ಸಿವಿಲ್ ಸರ್ವಿಸ್ ಬೋರ್ಡ್ ರಚಿಸಬೇಕೆಂದು ಆಗ್ರಹಿಸಿದ್ದಾರೆ.
ಇದಕ್ಕೆ ಉತ್ತರ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ದೇಶದ 31 ರಾಜ್ಯಗಳ ಪೈಕಿ 21 ರಾಜ್ಯ ಹಾಗೂ 4 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚಿಸಲಾಗಿದೆ. ರಾಜ್ಯದಲ್ಲಿಯೂ ಸಿವಿಲ್ ಸರ್ವಿಸ್ ಬೋರ್ಡ್ ರಚಿಸಲಿದ್ದು, ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.