HomeKarnatakaBIG NEWS : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ; ಸಿಎಂ...

BIG NEWS : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ; ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ʻಮಾನವ-ಆನೆ ಸಂಘರ್ಷ ನಿರ್ವಹಣೆʼ ವಿಷಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ . ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯವಾಗಿವೆ. ಅತಿ ಹೆಚ್ಚು ಹುಲಿ ಹೊಂದಿರುವ 2ನೇ ರಾಜ್ಯವಾಗಿದೆ. ಅಲ್ಲದೇ ಅತಿ ಹೆಚ್ಚು ಅರಣ್ಯ ಭೂಮಿ ಹೊಂದಿರುವ ರಾಜ್ಯ ಕರ್ನಾಟಕ ಆಗಿದೆ ಎಂದು ಹೇಳಿದರು.ಕಳೆದ 10 ವರ್ಷಗಳಲ್ಲಿ 2,500 ಮಾನವ-ಆನೆ ಸಂಘರ್ಷ ಪ್ರಕರಣಗಳು ಆಗಿವೆ. ಮಾನವ ಪ್ರಾಣಿ ಸಂಘರ್ಷಗಳ ತಡೆಗೆ ಕರ್ನಾಟಕ ಸರ್ಕಾರ ವಿಶೇಷ ಅನುದಾನ ನೀಡಿದೆ.ಬಜೆಟ್ ನಲ್ಲಿ ಇದಕ್ಕಾಗಿ ಹಣ ಮೀಡಲಿಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular