ಕಾರವಾರ: ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ ಎನ್ ಎಲ್ ಕಚೇರಿ ಬಳಿ ನಡೆದಿದೆ.
ಸತೀಶ್ ಕೊಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಇಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಸತೀಶ್ ಕೊಳಂಕರ್ ಮೇಲೆ ದಾಳಿ ನಡೆಸಿದ್ದಾರೆ. ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣ ಸತೀಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ವೈಯಕ್ತಿಕ ದ್ವೇಶಕ್ಕೆ ಸತೀಶ್ ಕೊಳಂಕರ್ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾರವಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.