BIG NEWS : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ‘SIT’ ತನಿಖೆಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

’ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ.

ಮುಖ್ಯಮಂತ್ರಿಗಳ ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್ ಐಟಿ ರಚನೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ಥೆಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಮನೆಗೆ ಕಳಿಸಿರುವುದಕ್ಕೆ ಸಿಎಂ ಬಳಿ ಉತ್ತರ ಇಲ್ಲ. ಹಾಗೂ ಅವಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೇಳಿರುವುದು. ಸರ್ಕಾರ ಇಷ್ಟು ದೊಡ್ಡ ಆರೋಗ್ಯ ಇಲಾಖೆ ಇದ್ದು, ಅವಳಿಗೆ ಸೂಕ್ತ ಚಿಕಿತ್ಸೆ ಕೊಡಲು ತಯಾರಿಲ್ಲ ಎಂದರೆ, ಮತ್ತು ಆ ಜವಾಬ್ದಾರಿಯನ್ನು ತಮ್ಮ ಶಾಸಕರಿಗೆ ವಹಿಸಿರುವಂಥದ್ದು ಈ ಪ್ರಕರಣವನ್ನು ಮುಚ್ಚಿ ಹಾಕುವ ಹಾಗೂ ಆ ಹೆಣ್ಣು ಮಗಳನ್ನು ಸಂಪೂರ್ಣ ಹತೋಟಿಗೆ ತೆಗೆದುಕೊಳ್ಳುವ ತಂತ್ರ ಗೊತ್ತಾಗುತ್ತದೆ. ಆದ್ದರಿಂದ ಅವಳಿಗೆ ಚಿಕಿತ್ಸೆಯನ್ನು ಸಂಪೂರ್ಣ ಸರ್ಕಾರಿ ವ್ಯವಸ್ಥೆ ಯಲ್ಲಿಯೇ ನೀಡಬೇಕು’’ ಎಂದು ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ.

https://twitter.com/BSBommai/status/1747161266072989973

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read