HomeKarnatakaಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು. ನನ್ನನ್ನು ಆಹ್ವಾನಿಸಿದ ಅವರೆಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular