HomeKarnatakaಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನ

ಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ದಿ. ಜೆ.ಹೆಚ್. ಪಟೇಲ್ ಅವರ ಅನುಯಾಯಿಯಾಗಿದ್ದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಣಿವೆಬಿಳಚಿ ಗ್ರಾಮದ ನಿವಾಸಿ ಪಿ. ಶೇಖರಪ್ಪ(82) ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಸಂಜೆ ಕಣಿವೆಬಿಳಚಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಸುಭದ್ರಾಬಾಯಿ, ಪುತ್ರ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಉದ್ಯೋಗಿ ಶ್ರೀನಿವಾಸರಾವ್ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಬುಧವಾರ ಸಂಜೆ ಕಣಿವೆಬಿಳಚಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆ.ಹೆಚ್. ಪಟೇಲರ ಕಟ್ಟಾ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ಚಿರಡೋಣಿ ಮಂಡಲ ಪಂಚಾಯಿತಿ ಪ್ರಧಾನರಾಗಿ ಕಾರ್ಯನಿರ್ವಹಿಸಿದ್ದರು. ನಂತರದಲ್ಲಿ ಅವರು ರಾಜಕೀಯದಿಂದ ದೂರ ಉಳಿದಿದ್ದರು. ಪಿ. ಶೇಖರಪ್ಪ ನಿಧನಕ್ಕೆ ಸ್ಥಳೀಯ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular