ಬೆಂಗಳೂರು : ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರು ಇಂದು ನಿಧನ ಹೊಂದಿದ್ದು, ಹಿರಿಯ ನಾಯಕರ ನಿಧನಕ್ಕೆ ಹಲವು ಗಣ್ಯರು ಸಂತಾ ಸೂಚಿಸಿದ್ದಾರೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಶ್ರೇಷ್ಠ ಸಂಸದೀಯಪಟುಗಳಲ್ಲಿ ಒಬ್ಬರು, ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಜನತಾ ಪರಿವಾರದ ಕೊಂಡಿ ಆಗಿದ್ದ ಶ್ರೀ ಡಿ.ಬಿ.ಚಂದ್ರೇಗೌಡರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಶ್ರೇಷ್ಠ ಸಂಸದೀಯಪಟುಗಳಲ್ಲಿ ಒಬ್ಬರು, ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಜನತಾ ಪರಿವಾರದ ಕೊಂಡಿ ಆಗಿದ್ದ ಶ್ರೀ ಡಿ.ಬಿ.ಚಂದ್ರೇಗೌಡರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು… pic.twitter.com/HsQUiL5KN0
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 7, 2023