ಇಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ವೈಕುಂಠ ಸಮಾರಾಧನೆ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಸೋಮನಹಳ್ಳಿಯ ಕೆಫೆ ಕಾಫಿ ಡೇ ಆವರಣದಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವೈಕುಂಠ ಸಮಾರಾಧನೆ ನಡೆಯಲಿದೆ.

ಎಸ್.ಎಂ. ಕೃಷ್ಣ ಅವರ 11ನೇ ದಿನದ ಭೂ ಶಾಂತಿ ಉತ್ತರ ಕ್ರಿಯಾದಿ ಕಾರ್ಯ ಶನಿವಾರ ನಡೆಯಲಿದ್ದು, ವೈಕುಂಠ ಸಮಾರಾಧನೆ ಕಾರ್ಯದಲ್ಲಿ ರಾಜ್ಯ ಸರ್ಕಾರದ ಸಚಿವರು, ಸಂಪುಟ ಸದಸ್ಯರು, ಶಾಸಕರು, ಮಾಜಿ ಶಾಸಕರು, ಕುಟುಂಬ ಸದಸ್ಯರ ಜೊತೆಗೆ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಜನ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಂದೋಬಸ್ತ್ ಸೇರಿದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಉಪ ಮುಖ್ಯಮಂತ್ರಿಯ ಡಿ.ಕೆ. ಶಿವಕುಮಾರ್, ಶಾಸಕ ಕೆ.ಎಂ. ಉದಯ್ ಅವರು ವೈಕುಂಠ ಸಮಾರಾಧನೆ ಪೂರ್ವ ಸಿದ್ಧತೆ ಪರಿಶೀಲಿಸಿದ್ದಾರೆ.

ಒಕ್ಕಲಿಗ ಸಂಪ್ರದಾಯದಂತೆ ನಡೆಯುವ ದಿನದ ವಿಧಿ ವಿಧಾನಗಳ ವೇಳೆ ಗೀತ ನಮನ, ಗಣ್ಯರಿಂದ ಪುಷ್ಪ ನಮನ ಇತರೆ ಕಾರ್ಯಕ್ರಮಗಳು ನಡೆಯಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read