ಬೆಂಗಳೂರು : ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ ಮಾಡಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಹೌದು, ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದುʼ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿಯಿದ್ದು, ಕಾಡಿನ ಬಗ್ಗೆ ಅಪಾರ ಪ್ರೀತಿಯಿದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆʼ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ಭಾರತ ತಂಡದ ನಾಯಕರಾದ ಶ್ರೀ @anilkumble1074 ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶಿಸಲು ನಿರ್ಧರಿಸಿದ್ದೇವೆ.
— Eshwar Khandre (@eshwar_khandre) May 27, 2025
ಶ್ರೀ ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ… pic.twitter.com/LNS4ThbVT4