ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಲು ಈಶ್ವರಪ್ಪ ಒತ್ತಾಯ

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ಮೋದಿಯವರಿಗೆ ಒತ್ತಾಯಿಸುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸದ ಡಿ.ಕೆ. ಸುರೇಶ್ ಮತ್ತು ಶಾಸಕ ವಿನಯ್ ಕುಲಕರ್ಣಿ ಅವರು ರಾಷ್ಟ್ರದ್ರೋಹಿಗಳು. ಅವರ ರೀತಿ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿಯವರಿಗೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಖಂಡ ಭಾರತದ ಬಗ್ಗೆ ಮಾತನಾಡಿದರೆ ಸಾಲದು, ತಾಕತ್ತಿದ್ದರೆ ಡಿ.ಕೆ. ಸುರೇಶ್ ಮತ್ತು ವಿನಯ್ ಕುಲಕರ್ಣಿ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಹೇಳಿದ್ದಾರೆ.

ಡಿ.ಕೆ. ಸುರೇಶ್ ಮತ್ತು ವಿನಯ್ ಕುಲಕರ್ಣಿಯವರ ಮಾತುಗಳಲ್ಲಿ ಜಿನ್ನಾ ಸಂಸ್ಕೃತಿ ಕಾಣುತ್ತಿದೆ. ಭಾರತ ವಿಭಜಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಅದಕ್ಕೆ ಅವಕಾಶ ಕೊಡುವುದಿಲ್ಲ. ಬೇಕಿದ್ದರೆ ಪಾಕಿಸ್ತಾನವನ್ನೇ ಭಾರತಕ್ಕೆ ಸೇರಿಸಿಕೊಂಡು ಅಖಂಡ ಭಾರತ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read