BREAKING : ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

ಮೀರತ್ : ಟೀಂ ಇಂಡಿಯಾ  ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ  ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರ ಕಾರು ಅಪಘಾತವಾಗಿದೆ.

ಮಂಗಳವಾರ ರಾತ್ರಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕೂಡ ಮೀರತ್ ನಲ್ಲಿ ಅಪಘಾತಕ್ಕೀಡಾಗಿದ್ದರು. ಮೀರತ್ನ ಕಮಿಷನರ್ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಮಾಜಿ ವೇಗಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ತಲುಪಿ ಆರೋಪಿ ಕ್ಯಾಂಟರ್ ಚಾಲಕನನ್ನು ಬಂಧಿಸಿದ್ದಾರೆ.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪಾಂಡವ ನಗರದಿಂದ ಲ್ಯಾಂಡ್ ರೋವರ್ ಡಿಫೆಂಡರ್ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ಆರೋಪಿ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕ್ಯಾಂಟರ್ ಚಾಲಕನನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read