HomeIndiaಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ RKS ಭದೌರಿಯಾ ಬಿಜೆಪಿ ಸೇರ್ಪಡೆ: ಉತ್ತರ ಪ್ರದೇಶದಿಂದ ಸ್ಪರ್ಧೆ ಸಾಧ್ಯತೆ

ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ RKS ಭದೌರಿಯಾ ಬಿಜೆಪಿ ಸೇರ್ಪಡೆ: ಉತ್ತರ ಪ್ರದೇಶದಿಂದ ಸ್ಪರ್ಧೆ ಸಾಧ್ಯತೆ

ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ(ನಿವೃತ್ತ) ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು.

ಭಾರತೀಯ ವಾಯುಪಡೆಯಲ್ಲಿ(ಐಎಎಫ್) ಭದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು, ರಕ್ಷಣಾ ಪಡೆಗಳಲ್ಲಿ ಸಕ್ರಿಯ ಪಾತ್ರ ವಹಿಸಿದ ನಂತರ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೊಡುಗೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭದೌರಿಯಾ ಅವರೊಂದಿಗೆ ವೈಎಸ್‌ಆರ್‌ಸಿಪಿ ನಾಯಕ ಮತ್ತು ತಿರುಪತಿಯ ಮಾಜಿ ಸಂಸದ ವರಪ್ರಸಾದ್ ರಾವ್ ಕೂಡ ಬಿಜೆಪಿ ಸೇರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಭದೌರಿಯಾ ಮಾತನಾಡಿ, ಮತ್ತೊಮ್ಮೆ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ನನಗೆ ಈ ಅವಕಾಶವನ್ನು ನೀಡಿದ ಪಕ್ಷದ ನಾಯಕತ್ವಕ್ಕೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಾಲ್ಕು ದಶಕಗಳಿಗೂ ಹೆಚ್ಚು ಕಾಲ IAF ಸೇವೆ ಸಲ್ಲಿಸಿದ್ದೇನೆ. ಬಿಜೆಪಿ ಸರ್ಕಾರ ನಮ್ಮ ಸಶಸ್ತ್ರ ಪಡೆಗಳನ್ನು ಸಬಲೀಕರಣ, ಆಧುನೀಕರಣ, ಸ್ವಾವಲಂಬಿಯಾಗಿ ಮಾಡಲು ತೆಗೆದುಕೊಂಡ ಕ್ರಮಗಳು ಹೊಸ ಸಾಮರ್ಥ್ಯ ತಂದಿವೆ ಎಂದರು.

ಭದೌರಿಯಾ ಉತ್ತರ ಪ್ರದೇಶದವರು. ಲೋಕಸಭೆ ಚುನಾವಣೆಗೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳನ್ನು ಹೆಸರಿಸಿಲ್ಲ. ಭದೌರಿಯಾ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular