HomeLive Newsಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್

ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು ತಮ್ಮ 43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

2000ದ ಇಸವಿಯಲ್ಲಿ ಭಾರತ ಮತ್ತು ಕೀನ್ಯಾ ನಡುವಣ ನಡೆದ ಏಕದಿನ ಪಂದ್ಯದ ಮೂಲಕ ಕ್ರಿಕೆಟ್ ಲೋಕಕ್ಕೆ  ಪಾದಾರ್ಪಣೆ ಮಾಡಿದ ಇವರು ಏಕದಿನ ಕ್ರಿಕೆಟ್ ನಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ನಿಂದಲೇ  ಹೆಸರುವಾಸಿಯಾದರು. ಬಳಿಕ 2003ರಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದರು.

2007ರ  ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಇಂಗ್ಲೆಂಡ್  ಪಂದ್ಯದಲ್ಲಿ 6 ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸುವ ಮೂಲಕ  ಹೊಸ ದಾಖಲೆ ಬರೆದಿದ್ದರು. ಟಿ20 ಕ್ರಿಕೆಟ್ ನಲ್ಲಿ ಈ ರೀತಿಯು ಬ್ಯಾಟಿಂಗ್ ಮಾಡಬಹುದು ಎಂದು ತೋರಿಸಿಕೊಟ್ಟ ಯುವರಾಜ್ ಸಿಂಗ್ ಇಂದಿಗೂ ಕ್ರಿಕೆಟ್ ಪ್ರೇಮಿಗಳ ಫೇವರೆಟ್ ಆಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು  ಹಿರಿಯ ಹಾಗೂ ಯುವ ಕ್ರಿಕೆಟಿಗರು ಯುವರಾಜ್ ಸಿಂಗ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವರಾಜ್ ಸಿಂಗ್ ಆರು ಎಸೆತಗಳಲ್ಲಿ ಆರು ಸಿಕ್ಸರ್ ಬಾರಿಸಿದ ವಿಡಿಯೋ ಇಲ್ಲಿದೆ ನೋಡಿ;

 

For Latest News Updates, Join Our Whatsapp Community🚩
RELATED ARTICLES

Most Popular