BREAKING : ‘ISRO’ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ, ಸಿಎಂ ಸಿದ್ದರಾಮಯ್ಯ ಸಂತಾಪ .!

ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ”ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ.ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು.ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ.ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read