HomeKarnatakaBIG BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ | SM Krishna passes away

BIG BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ | SM Krishna passes away

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಸದಾಶಿವನಗರದ ನಿವಾಸದಲ್ಲಿ ಪಾರ್ಥಿವ ಶರೀರ ಇರಿಸಲಾಗಿದೆ. ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲ ಕಾಲ ಆಸ್ಪತ್ರೆಗೂ ದಾಖಲಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಂ.ಕೃಷ್ಣ(ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-1932) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.

ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು.

ಅವರು 1999ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

1971ರಿಂದ 2014ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular