HomeIndiaಸಿಬಿಐ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಕರ್ನಾಟಕದ ಮಾಜಿ ಡಿಜಿಪಿ ಪ್ರವೀಣ್ ಸೂದ್

ಸಿಬಿಐ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಕರ್ನಾಟಕದ ಮಾಜಿ ಡಿಜಿಪಿ ಪ್ರವೀಣ್ ಸೂದ್

ನವದೆಹಲಿ: ಸಿಬಿಐ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಇಂದು ಅಧಿಕಾರ ಸ್ವೀಕರಿಸಿದ್ದು, ಎರಡು ವರ್ಷಗಳ ಕಾಲ ಅವರು ಹುದ್ದೆಯಲ್ಲಿರುತ್ತಾರೆ.

ನಿರ್ಗಮಿತ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರು ನವದೆಹಲಿಯ ಸಿಬಿಐ ಪ್ರಧಾನ ಕಚೇರಿಯಲ್ಲಿ ಏಜೆನ್ಸಿಯ ಉಸ್ತುವಾರಿಯನ್ನು ಪ್ರವೀಣ್ ಸೂದ್ ಅವರಿಗೆ ಹಸ್ತಾಂತರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರವೀಣ್ ಸೂದ್ ಕರ್ನಾಟಕ ಕೇಡರ್‌ನ 1986 ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ(ಐಪಿಎಸ್) ಅಧಿಕಾರಿಯಾಗಿದ್ದು, ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಅವರು ಜೈಸ್ವಾಲ್ ನಂತರ ದೇಶದ ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿ.

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ಸೂದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular