HomeKarnatakaಮಾಜಿ ಸಚಿವ ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡು ವಿವಿ ಗೌರವ ಡಾಕ್ಟರೇಟ್ ಪ್ರದಾನ

ಮಾಜಿ ಸಚಿವ ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡು ವಿವಿ ಗೌರವ ಡಾಕ್ಟರೇಟ್ ಪ್ರದಾನ

ಶಿವಮೊಗ್ಗ: ಮಾಜಿ ಸಚಿವ, ಮಾಜಿ ಸ್ಪೀಕರ್, ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಶಿವಮೊಗ್ಗದ ಎರಡು ವಿವಿಗಳು ಒಂದೇ ದಿನ ಗೌರವ ಡಾಕ್ಟರೇಟ್  ಪ್ರದಾನ ಮಾಡಲಿವೆ.

ಕುವೆಂಪು ವಿಶ್ವವಿದ್ಯಾಲಯ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಕಾಗೋಡು ತಿಮ್ಮಪ್ಪ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ. ಈ ಪ್ರಕ್ರಿಯೆ ಗೌಪ್ಯವಾಗಿ ನಡೆಯುವುದರಿಂದ ಎರಡೂ ವಿವಿಗಳಿಗೆ ಮತ್ತೊಂದು ವಿವಿಯಲ್ಲಿ ಕಾಗೋಡು ತಿಮ್ಮಪ್ಪ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿರುವ ಸಂಗತಿ ಗೊತ್ತಾಗಿಲ್ಲ. ಸಮಾರಂಭ ನಿಗದಿಯಾದ ನಂತರ ಇದು ಗೊತ್ತಾಗಿದೆ.

ಎರಡು ವಿವಿಗಳು ರಾಜ್ಯಪಾಲರ ಶಿವಮೊಗ್ಗ ಪ್ರವಾಸ ದಿನಾಂಕ ಅನುಗುಣವಾಗಿ ಜನವರಿ 22ರಂದು ಘಟಿಕೋತ್ಸವ ಹಮ್ಮಿಕೊಂಡಿವೆ. ಜನವರಿ 22ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ವಿವಿ ಘಟಿಕೋತ್ಸವ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಕೆಳದಿ ಶಿವಪ್ಪ ನಾಯಕ ವಿವಿ ಘಟಿಕೋತ್ಸವ ನಡೆಯಲಿದ್ದು, ಕಾಗೋಡು ತಿಮ್ಮಪ್ಪ ಅವರು ಬೆಳಗ್ಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್, ಮಧ್ಯಾಹ್ನ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲಿದ್ದಾರೆ. ಎರಡೂ ವಿವಿಗಳಿಂದ ಕಾಗೋಡು ತಿಮ್ಮಪ್ಪನವರ ನಿವಾಸಕ್ಕೆ ತೆರಳಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಆಹ್ವಾನ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular