HomeKarnatakaBREAKING: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶ | Former Minister Manohar Tehsildar Passed...

BREAKING: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶ | Former Minister Manohar Tehsildar Passed Away

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಮನೋಹರ ತಹಶೀಲ್ದಾರ್ ಅವರನ್ನು ಬೆಂಗಳೂರಿನ ಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹಾನಗಲ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಬಿಇ ಮೆಕಾನಿಕಲ್ ಪದವೀಧರರಾಗಿದ್ದರು. ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಪಸಭಾಪತಿಯಾಗಿದ್ದರು. 1978 ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 1989, 1999 ಮತ್ತು 2013ರಲ್ಲಿ ಗೆಲುವು ಸಾಧಿಸಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹವನ್ನು ಹಾನಗಲ್ ಗೆ ಕೊಂಡೊಯ್ಯಲಿದ್ದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಅವರ ಸ್ವಗ್ರಾಮ ಅಕ್ಕಿಹೊಳಿಯ ತೋಟದ ಜಮೀನಿನಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular