ಬೆಂಗಳೂರು : ಮಾಜಿ ಸಚಿವ ಬಿ. ನಾಗೇಂದ್ರಗೂ ಇಡಿ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಶಾಸಕರ ಭವನದಲ್ಲಿರುವ ಬಿ. ನಾಗೇಂದ್ರ ಕೊಠಡಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿ , ಬೆಂಗಳೂರಿನಲ್ಲಿ ಏಕಕಾಲಕ್ಕೆ ಇಡಿ ದಾಳಿ ನಡೆಸಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಾಲ್ಮೀಕಿ ನಿಗಮದ ಹಣ ಲೋಕಸಭೆ ಚುನಾವಣೆಗೆ ಬಳಸಿದ ಆರೋಪದ ಮೇಲೆ ಇಡಿ ದಾಳಿ ನಡೆಸಿ ದಾಖಲೆಗಳನ್ನು ಕೆದಕುತ್ತಿದೆ.
ಲೋಕಸಭೆ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆ ಆರೋಪದ ಮೇರೆಗೆ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಅದೇ ರೀತಿ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ.ಅದೇ ರೀತಿ ಮಾಜಿ ಸಚಿವ ನಾಗೇಂದ್ರ ಪಿಎ ಗೋವರ್ಧನ್ ಗೂ ಇಡಿ ಶಾಕ್ ಎದುರಾಗಿದೆ.
TAGGED:E.D ಶಾಕ್