HomeKarnatakaBIG NEWS: ಗೂಂಡಾಗಳನ್ನು ಬಿಟ್ಟು ನನ್ನ ಹತ್ಯೆಗೆ ಸಂಚು; ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ...

BIG NEWS: ಗೂಂಡಾಗಳನ್ನು ಬಿಟ್ಟು ನನ್ನ ಹತ್ಯೆಗೆ ಸಂಚು; ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ ಮಾಡಿದ್ದಾರೆ. ಸ್ವಪಕ್ಷದ ನಾಯಕನ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಭಗವಂತ ಖೂಬಾಗೆ ನನ್ನ ಮೇಲೆ ಕೋಪವಿದ್ದರೆ ಗುಂಡಿಕ್ಕಿ ಹತ್ಯೆ ಮಾಡಲಿ. ಆದರೆ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಖೂಬಾ ದ್ರೋಹ ಮಾಡದಿರಲಿ ಎಂದು ಪ್ರಭು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಗವಂತ ಖೂಬಾ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ನನ್ನ ಹತ್ಯೆಗೆ ಗೂಂಡಾಗಳನ್ನು ಬಿಟ್ಟು ವಿಫಲ ಯತ್ನ ನಡೆಸಿದರು. ನನ್ನನ್ನು ಕೊಂದು 6 ತಿಂಗಳಲ್ಲಿ ಉಪಚುನಾವಣೆಗೂ ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಸ್ತೆ ಮಧ್ಯೆ ಗುಂಡುಹಾರಿಸಿ ಕೊಲೆ ಮಾಡಲು ಸಂಚು ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಭಗವಂತಾ ಖೂಬಾ ಬೆಂಬಲಿಗರಿಂದಲೇ ನನಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular