BIG NEWS : ಎರಡು ಕ್ಷೇತ್ರದ ಚುನಾವಣೆ ಸೋಲಿನ ರಹಸ್ಯ ಬಿಚ್ಚಿಟ್ಟ ಮಾಜಿ ಸಚಿವ ವಿ.ಸೋಮಣ್ಣ

ತುಮಕೂರು : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಸಿದ್ದಲಿಂಗಾ ಶ್ರೀಗಳನ್ನು ಭೇಟಿಯಾಗಿದ್ದಾರೆ.

ನಂತರ ಮಾತನಾಡಿದ ಮಾಜಿ ಸಚಿವ ಸೋಮಣ್ಣ ‘ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧ’ ‘ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು’ 2 ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಎಂದರು ಎಂದು ಸೋಮಣ್ಣ ಅಸಮಾಧಾನ ಹೊರ ಹಾಕಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ವಿ ಸೋಮಣ್ಣ ವರುಣ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರದಲ್ಲಿ ಸೋತಿದ್ದರು, ಇದರಿಂದ ಬೇಸರಗೊಂಡ ಸೋಮಣ್ಣ ಸಿದ್ದಲಿಂಗಾ ಶ್ರೀಗಳ ಎದುರು ಅಸಮಾಧಾನ ಹೊರ ಹಾಕಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read