HomeKarnatakaBIG NEWS: ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಹಾಗೂ ಆಕೆಯ...

BIG NEWS: ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು 8 ದಿನ ಕಸ್ಟಡಿಗೆ ಪಡೆದ ಸಿಸಿಬಿ ಪೊಲೀಸರು

ಬೆಂಗಳೂರು: ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿಯನ್ನು ಬಂಧಿಸಿದ್ದು, ಕಸ್ಟಡಿಗೆ ಪಡೆದಿದ್ದಾರೆ.

ಮಾಜಿ ಸಚಿವ ಪುತ್ರನಿಗೆ ಮೆಸೇಜ್ ಮೂಲಕ ಪರಿಚಯಿಸಿಕೊಂಡು ಬಳಿಕ ಅಸ್ಲೀಲ ಸಂದೇಶ ರವಾನೆ, ವಾಟ್ಸಪ್ ಕಾಲ್, ವಿಡಿಯೋ ಕಾಲ್ ಮಾಡಿದ್ದ ಆರೋಪಿ ಮಹಿಳೆ ಮಂಜುಳಾ ಪಾಟೀಲ್ ಬಳಿಕ 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಇದಕ್ಕೆ ಪತಿ ಶಿವರಾಜ್ ಪಾಟೀಲ್ ಸಾಥ್ ನೀಡಿದ್ದ ಎನ್ನಲಾಗಿದೆ.

ಮಾಜಿ ಸಚಿವರ ಪುತ್ರ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹೆಚ್ಚಿನ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು 8 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು, ವಾಟ್ಸಪ್ ಸಂದೇಶ, ವಿಡಿಯೋ ಕಾಲ್, ಫೋನ್ ರೆಕಾರ್ಡ್ ಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular