HomeKarnatakaBREAKING: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

BREAKING: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

ಬೆಂಗಳೂರು: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಉಚ್ಚಾಟಿಸಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಟಿಕೆಟ್ ಸಿಗದಿರುವುದಕ್ಕೆ ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕಣಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಅವರಿಗೆ ನೋಟಿಸ್ ನೀಡಲಾಗಿತ್ತು. ಪಕ್ಷದ ಹಿರಿಯ ನಾಯಕರು ಕೂಡ ಮನವೊಲಿಸಲು ಪ್ರಯತ್ನ ನಡೆಸಿದ್ದರು.

ಆದರೂ ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದ ರಘುಪತಿ ಭಟ್ ಪ್ರಚಾರ ನಡೆಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular