ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನರಾಗಿದ್ದಾರೆ.
ಶಿವಶರಣಪ್ಪಗೌಡ ಪಾಟೀಲ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ
ಅನಾರೋಗ್ಯದ ಹಿನ್ನೆಲೆಯಲ್ಲಿ ತುಮಕೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ ಶಿವಶರಣಪ್ಪಗೌಡ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ನಾಳೆ ಯಲಬುರ್ಗಾ ಹುಣಿಸ್ಯಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಶಿವಶರಣಗೌಡ ಪಾಟೀಲ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೊದಲು ಎರಡು ಸಲ ಪರಾಭಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಅಲ್ಲದೇ ಅವರು ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
