
ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ಡಿಸಿಎಂ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ನಂತರ ಮಾತನಾಡಿದ ಅವರು ಬಿಜೆಪಿ ಬೆಳೆಯುವವರನ್ನು ಬಿಡುವುದಿಲ್ಲ, ಇದರಿಂದ ನನಗೆ ಬಹಳ ನೋವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಡ ನಿರ್ಧಾರ ಮಾಡಿದ್ದೇನೆ ಎಂದರು.

