ಕಾರವಾರ: ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಅವರಿಗೆ ಜೀವ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಅನಂತಕುಮಾರ್ ಹೆಗ್ಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ದೂರು ದಾಖಲಿಸಿದ್ದಾರೆ.
ಜೂನ್ 24ರಂದು ಇ-ಮೇಲ್ ಬೆದರಿಕೆ ಬಂದಿದ್ದು, ನ್ಯಾಯಾಲಯದ ಅನುಮತಿಯೊಂದಿಗೆ ಇಂದು ಪೊಲೀಸ್ ದೂರು ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.