ʼಕಾಂಗ್ರೆಸ್ʼ ಸೇರ್ಪಡೆಯಾಗುತ್ತಿರುವ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಂಸದ

ayanur manjunath

ಶಿವಮೊಗ್ಗ: ಕಳೆದ ಒಂದು ತಿಂಗಳಿನಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸುದ್ದಿ ಹರಡಿದ್ದು, ಇದಕ್ಕೆ ಪೂರ್ಣವಿರಾಮ ನೀಡಿ ನಿರೀಕ್ಷೆಯಂತೆ ನಾಳೆ ಬೆಳಿಗ್ಗೆ 10-30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಸಂಸದ ಆಯನೂರು ಮಂಜುನಾಥ್ ತಿಳಿಸಿದರು.

ಅವರು ಇಂದು ಮಥುರಾ ಪ್ಯಾರಾಡೈಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಮುಖಂಡರೊಂದಿಗೆ ಚರ್ಚೆ ನಡೆದು ಪಕ್ಷ ಸೇರ್ಪಡೆಗೆ ಸಹಮತ ವ್ಯಕ್ತಪಡಿಸಿದ್ದರಿಂದ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದರು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಅವಕಾಶವಿತ್ತು. ಕಾರಣಾಂತರಗಳಿಂದ ಆಗಿರಲಿಲ್ಲ. ಈಗ ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಎಲ್ಲರೂ ಸೇರಿ ಶಕ್ತಿ ಹಾಗೂ ಸಮಯ ನೀಡುತ್ತೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೆ. ಆದರೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ನಿಂದ ಅವಕಾಶ ಸಿಕ್ಕಿದ್ದರಿಂದ ಸ್ಪರ್ಧೆ ಮಾಡಿದ್ದೆ ಎಂದರು.

ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸೇರ್ಪಡೆಗೆ ಒಳ್ಳೆಯ ಅವಕಾಶವಿದೆ ಹಾಗೂ ಸಹಕಾರ ದೊರೆಯುತ್ತದೆ ಎಂಬ ವಿಶ್ವಾಸದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದು, ಯಾವುದೇ ಷರತ್ತು ಇಲ್ಲದೆ ಸೇರ್ಪಡೆಗೊಳ್ಳುತ್ತಿದ್ದು, ವಿಧಾನ ಪರಿಷತ್‌ನ ಪದವೀಧರರ ಕ್ಷೇತ್ರ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷ ಅವಕಾಶ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read