HomeKarnatakaBREAKING : ಅಧಿಕೃತವಾಗಿ 'ಕಾಂಗ್ರೆಸ್' ಸೇರ್ಪಡೆಯಾದ ಮಾಜಿ ಸಂಸದ 'ಆಯನೂರು ಮಂಜುನಾಥ್'

BREAKING : ಅಧಿಕೃತವಾಗಿ ‘ಕಾಂಗ್ರೆಸ್’ ಸೇರ್ಪಡೆಯಾದ ಮಾಜಿ ಸಂಸದ ‘ಆಯನೂರು ಮಂಜುನಾಥ್’

ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ‘ಕೈ’ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಆಯನೂರು ಮಂಜುನಾಥ್ ಬೆಂಬಲಿಗರು ಕೂಡ ಸಾಥ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಪ್ರಯತ್ನಿಸಿ ವಿಫಲರಾಗಿದ್ದ ಆಯನೂರು ಮಂಜುನಾಥ್ ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ರಾಜ್ಯಸಭೆ, ಲೋಕಸಭೆ, ವಿಧಾನಸಭೆ, ವಿಧಾನಪರಿಷತ್ ಹೀಗೆ ನಾಲ್ಕು ಸದನಗಳನ್ನು ಪ್ರತಿನಿಧಿಸಿರುವ ಆಯನೂರು ಮಂಜುನಾಥ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular