ಬೆಂಗಳೂರು : ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ( D.K Suresh ) ನಾಮಪತ್ರ ಸಲ್ಲಿಸಿದ್ದಾರೆ.
ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಂಸದ ಡಿ.ಕೆ. ಸುರೇಶ್ ಕಣ್ಣಿಟ್ಟಿದ್ದು, ಇಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದು, ಒಟ್ಟು 14 ನಿರ್ದೇಶಕರನ್ನು ಬಮೂಲ್ ಒಳಗೊಂಡಿದೆ.
ಬಹುತೇಕ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಆಯ್ಕೆ ಖಚಿತವಾಗಿದೆ. ಕಳೆದ ತಿಂಗಳು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ಇಂದು ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ಬಮೂಲ್ನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದೆ. ನಮ್ಮ ಹೈನುಗಾರರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಹಾಗೂ ಆಶೀರ್ವಾದವಿರಲಿ. ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ಡಿಕೆ ಸುರೇಶ್ ಟ್ವೀಟ್ ಮಾಡಿದ್ದಾರೆ.
ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದ ಕ್ಷಣಗಳು.#BAMUL pic.twitter.com/Ypv02tDSzj
— DK Suresh (@DKSureshINC) June 19, 2025