ಬೆಂಗಳೂರು : ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.
ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಡಿಕೆ ಸುರೇಶ್ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.

