BREAKING : ಮಾಜಿ ಸಂಸದ ‘ಇಕ್ಬಾಲ್ ಅಹ್ಮದ್ ಸರಡಗಿ’ ವಿಧಿವಶ

ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿಯವರು ಇಂದು ಬೆಳಗ್ಗಿನ ಜಾವ 1 ಗಂಟೆಗೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಂದು ಸಂಜೆ 6 ಗಂಟೆಗೆ ನಗರದಲ್ಲಿ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ. ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸರಡಗಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read