BIG NEWS : ಮಾಜಿ ಸಂಸದ ‘ಪ್ರತಾಪ್ ಸಿಂಹ’ ಮಹಾನ್ ‘ಕೋಮುವಾದಿ’ : CM ಸಿದ್ದರಾಮಯ್ಯ ವಾಗ್ಧಾಳಿ.!

ಬೆಂಗಳೂರು : ವಕ್ಫ್ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಅವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುವುದು ಇದನ್ನು ಮಾತ್ರ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ? ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ. ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು.. ಅವು ಅಭಿವೃದ್ಧಿಯಲ್ಲವೆ? 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ. ಇವೆಲ್ಲ ಅಭಿವೃದ್ದಿಯಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ಬಿಜೆಪಿಯವರು ಗ್ಯಾರಂಟಿಗೆ ವಿರುದ್ಧವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಬಡವರಾಗಿಯೇ ಇರಬೇಕು. ಅದಕ್ಕೆ ಬಿಜೆಪಿ ಅವರನ್ನು ಬಡವರ ವಿರೋಧಿಗಳು ಎಂದು ಕರೆಯುವುದು. ಜನರಲ್ಲಿ ಶಕ್ತಿ ಇಲ್ಲದಿದ್ದರೆ ತಾನೇ ಅವರನ್ನು ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಪಕ್ಷ 600 ಭರವಸೆಗಳನ್ನು 2018 ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ? ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ. ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ ಲೆಕ್ಕ ಕೊಡುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read