ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡರು ದೆಹಲಿ ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಹಿರಿಯ ಅಧಿಕಾರಿಗಳು ಸಾಥ್ ನೀಡಿದ್ದಾರೆ. ರಾಜ್ಯಸಭಾ ಸದಸ್ಯರಾಗಿರುವ ದೇವೇಗೌಡರು ಪ್ರಸ್ತುತ ದೆಹಲಿಯಲ್ಲಿದ್ದು, ಅವರ ಮೆಟ್ರೋ ಸಂಚಾರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸ್ವತಃ ದೇವೇಗೌಡರು ಸಹ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ (ಈ ಹಿಂದಿನ ಟ್ವಿಟ್ಟರ್) ತಮ್ಮ ಮೆಟ್ರೋ ಸಂಚಾರದ ವಿಡಿಯೋವನ್ನು ಹಂಚಿಕೊಂಡಿದ್ದು, ಈ ಹಿಂದೆ 1996 ರಲ್ಲಿ ಪ್ರಧಾನಮಂತ್ರಿಯಾಗಿದ್ದ ವೇಳೆ ಸಂಪುಟ ಸಹೋದ್ಯೋಗಿಗಳ ವಿರೋಧದ ನಡುವೆಯೂ ದೆಹಲಿ ಮೆಟ್ರೋಗೆ ಹಣಕಾಸು ಮಂಜೂರು ಮಾಡಿದ್ದನ್ನು ಸ್ಮರಿಸಿಕೊಂಡಿದ್ದಾರೆ.
ಅಲ್ಲದೆ ದೆಹಲಿ ಮೆಟ್ರೋದಲ್ಲಿ ಸಂಚರಿಸಬೇಕೆಂಬ ತಮ್ಮ ಬಹುಕಾಲದ ಕನಸು ಈ ಸಂದರ್ಭದಲ್ಲಿ ಸಾಧ್ಯವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ 91 ವರ್ಷದ ದೇವೇಗೌಡರು, ತಮ್ಮ ಈ ಸಂಚಾರದ ಸಂದರ್ಭದಲ್ಲಿ ಸಹ ಪ್ರಯಾಣಿಕರೊಂದಿಗೆ ಲವಲವಿಕೆಯಿಂದ ಮಾತನಾಡಿದ್ದಾರೆ.
https://twitter.com/H_D_Devegowda/status/1820053942627377377?ref_src=twsrc%5Etfw%7Ctwcamp%5Etweetembed%7Ctwterm%5E1820053942627377377%7Ctwgr%5E000b004f99bd81304585c8adfd400e889c49b231%7Ctwcon%5Es1_&ref_url=https%3A%2F%2Fwww.news18.com%2Findia%2Fformer-pm-hd-devegowda-takes-ride-in-delhi-metro-wish-fulfilled-today-watch-8989907.html