HomeLatest NewsBREAKING : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಡಿ.ಆರ್. ಜೈರಾಜ್ ನಿಧನ

BREAKING : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಡಿ.ಆರ್. ಜೈರಾಜ್ ನಿಧನ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಡಿ.ಆರ್. ಜೈರಾಜ್ (75) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾಗಿದ್ದು, ಅಲ್ಲಿನ ಪ್ರಸಿದ್ಧ ಚನ್ನಬಸವೇಶ್ವರ ಚಿತ್ರಮಂದಿರದ ಮಾಲೀಕರಾಗಿದ್ದರು.2019ರಲ್ಲಿ ಪ್ರದರ್ಶಕರ ವಲಯದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಹಲವಾರು ಚಿತ್ರಗಳ ವಿತರಣೆ ಮತ್ತು ಪ್ರದರ್ಶನದಲ್ಲಿ ಸಕ್ರಿಯರಾಗಿದ್ದರು.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇಂದು (ಮಾರ್ಚ್ 14, ಶನಿವಾರ)ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಇಂದು ಮಧ್ಯಾಹ್ನದ ನಂತರ ಅವರ ಹುಟ್ಟೂರಾದ ಗುಬ್ಬಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗಣ್ಯರ ನಿಧನಕ್ಕೆ ಚಿತ್ರರಂಗ ಸಂತಾಪ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular