HomeAgricultureBIG NEWS: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ದೇವೇಗೌಡರ ಭರವಸೆ

BIG NEWS: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ದೇವೇಗೌಡರ ಭರವಸೆ

ನವದೆಹಲಿ: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭರವಸೆ ನೀಡಿದ್ದಾರೆ.

ವಾಣಿಜ್ಯ ಬೆಳೆ ತಂಬಾಕಿಗೆ ಸಮರ್ಪಕ ಬೆಂಬಲ ಬೆಲೆ ಮತ್ತು ತಂಬಾಕು ಬೆಳೆಗಾರರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಮಂತ್ರಿ ಮತ್ತು ರಾಜ್ಯಸಭಾ ಸದಸ್ಯರೂ ಆಗಿರುವ ಹೆಚ್. ಡಿ ದೇವೇಗೌಡ ಅವರನ್ನು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡ ಅವರು ರೈತರೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ವಾಣಿಜ್ಯ ಸಚಿವರು ಹಾಗೂ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಮುಂದಿನ ಕ್ರಮ ವಹಿಸುವುದಾಗಿ ಹೆಚ್.ಡಿ ದೇವೇಗೌಡರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಿರಿಯಾಪಟ್ಟಣದ ರೈತ ಮುಖಂಡ ಪ್ರಸನ್ನ ಸೇರಿದಂತೆ ಹುಣಸೂರು ಭಾಗದ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular